ಹಾಸನ: ಬ್ರೇಕ್ ಫೇಲ್ ಆದ ಖಾಸಗಿ ಬಸ್ ರಸ್ತೆ ಬದಿಯಲ್ಲಿನ ಡಿವೈಡರ್ಗೆ ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಾಹಿತಿ ದೊರೆತಿದೆ.
ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಮಳಲಿ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದ್ದು. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೆ ಈಡಾಗಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಳಲಿ ಬೈಪಾಸ್ನಲ್ಲಿ ಬಸ್ನ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಯುವತಿ ಮೇಲೆ ಹಲ್ಲೆ ಮಾಡಿ ಪೋಲಿಸರ ಅಥಿತಿಯಾದ ಭೂಪ !
ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಕಲೇಶಪುರ ನಗರ ಪೋಲಿಸ್ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ದೊರೆತಿದೆ.