ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ತೆಲುಗು ನಟ ಮೋಹನ್ ಬಾಬು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೋಹನ್ ಬಾಬು ಮತ್ತು ಅವರ ಕಿರಿಯ ಮಗ ಮನೋಜ್ ನಡುವಿನ ವಿವಾದದ ಬಗ್ಗೆ ವರದಿ ಮಾಡಲು ಜಲಪಲ್ಲಿ ನಿವಾಸಕ್ಕೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.
ಮೋಹನ್ ಬಾಬು ಹಾಗೂ ಹಿರಿಯ ಮಗ ವಿಷ್ಣು ಪತ್ರಕರ್ತರ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದ್ದಾರೆ ಎಂದು ಪತ್ರಕರ್ತರೊಬ್ಬರು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.’ನಟ ಮೋಹನ್ ಬಾಬು ಅವರು ನಮ್ಮ ಮೈಕ್ನ್ನು ಅನ್ನು ಕಿತ್ತುಕೊಂಡು, ಅವಾಚ್ಯ ಪದಗಳಿಂದ ನಮ್ಮನ್ನು ನಿಂದಿಸಿದ್ದಾರೆ ಎಂದು ಮಾಧ್ಯಮವೊಂದರ ಛಾಯಾಗ್ರಾಹಕರು’ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
‘ಕೌಟುಂಬಿಕ ಕಲಹವು ಆಸ್ತಿಯ ಪಾಲಿಗಾಗಿ ಅಲ್ಲ. ನನ್ನ ಸ್ವಾಭಿಮಾನ ಹಾಗೂ ನನ್ನ ಹೆಂಡತಿ, ಮಕ್ಕಳ ಸುರಕ್ಷತೆಗಾಗಿ ಎಂದು ಮನೋಜ್ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ರಕ್ಷಣೆಗಾಗಿ ಪೊಲೀಸ್ ಭದ್ರತೆಯನ್ನು ಕೋರಿದ್ದೇವೆ’ ಎಂದೂ ಮನೋಜ್ ತಿಳಿಸಿದ್ದಾರೆ.’ಕೌಟುಂಬಿಕ ಕಲಹವು ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಯಲಿದೆ’ಎಂದು ಹೇಳಿದ್ದಾರೆ.
ಹಲ್ಲೆ ಸಂಬಂಧ ನಟ ಮೋಹನ್ ಬಾಬು ಪತ್ರಕರ್ತರಿಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಪತ್ರಕರ್ತರು ಪ್ರತಿಭಟನೆ ನಡೆಸಿದ್ದು. ಈ ನಡುವೆ ಮೋಹನ್ ಬಾಬು ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪತ್ರಕರ್ತರ ದೂರು ಆಧರಿಸಿ, ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ