ಶಿವಮೊಗ್ಗ : ಹಿಂದು ಮುಖಂಡ ಹರ್ಷ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ಹೇಳಬೇಕಿದ್ದ ವ್ಯಕ್ತಿಗೆ ಅಪರಿಚಿತನೊಬ್ಬ ಬೆದರಿಕೆ ಹಾಕಿದ್ದು. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.
ಭಜರಂಗ ದಳದಲ್ಲಿ ಸಕ್ರಿಯ ಸದಸ್ಯನಾಗಿದ್ದ ಹರ್ಷನ ಹತ್ಯೆ ಶಿವಮೊಗ್ಗದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಎನ್ಐಎ ತನಿಖೆ ನಡೆಸಿ ನ್ಯಾಯಲಯಕ್ಕೆ ಚಾರ್ಜಶೀಟ್ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪೆಟ್ರೋಲ್ ಬಂಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಭಿಷೇಕ್ ಎಂಬಾತನಿಗೆ ಈಗ ಬೆದರಿಕೆ ಬಂದಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಪೆಟ್ರೋಲ್ ಬಂಕ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತನೊಬ್ಬ ಸ್ಕೂಟಿಯಲ್ಲಿ ಪೆಟ್ರೋಲ್ ಬಂಕ್ಗೆ ಬಂದಿದ್ದು. ಕೋರ್ಟ್ಗೆ ಹೋಗಬೇಡ ಎಂದು ಹೇಳಿ ಹೋಗಿದ್ದಾನೆ. ಆದರೆ ಇದಕ್ಕೆ ಹೆದರದ ಅಭಿಷೇಕ್ ಡಿಸೆಂಬರ್ 12ರಂದು ಎನ್ಐಎ ನ್ಯಾಯಾಲಯಕ್ಕೆ ವಿಷಯ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಕೋರ್ಟ್ ಸೂಚನೆಯ ಮೇರೆಗೆ ತುಂಬಾನಗರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುವವನಿಗೆ ಬೆದರಿಕೆ ಯಾಕೆ !
ಹರ್ಷ ಹತ್ಯೆಯಾಗುವ ದಿನ ಆರೋಪಿಗಳು ಇದೇ ಪೆಟ್ರೋಲ್ ಬಂಕ್ನಲ್ಲಿ ತಮ್ಮ ಕಾರಿಗೆ ಇಂಧನ ತುಂಬಿಸಿಕೊಂಡಿದ್ದರು. ಅಂದು ಪೆಟ್ರೋಲ್ ಬಂಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಭಿಷೇಕ್ ಇವರನ್ನು ನೋಡಿದ್ದನು ಎಂಬ ಆಧಾರದ ಮೇಲೆ ಈ ಪ್ರಕರಣದಲ್ಲಿ ಸಾಕ್ಷಿಯಾಗಿಸಲಾಗಿದೆ.