ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ಸ್ಪಿನರ್ ಅಶ್ವಿನ್ ನಿವೃತ್ತಿ ಘೋಷಿಸಿದ್ದು. ಕೂಡಲೆ ಜಾರಿಗೆ ಬರುವಂತೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
106 ಟೆಸ್ಟ್ ಪಂದ್ಯದಲ್ಲಿ 24ರ ಸರಾಸರಿಯಲ್ಲಿ 537 ವಿಕೆಟ್‌ಗಳೊಂದಿಗೆ ಅಶ್ವಿನ್ ತನ್ನ ಟೆಸ್ಟ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದು. ಅನಿಲ್ ಕುಂಬ್ಳೆ ನಂತರ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಆಟಗಾರ ಎಂಬ ಕೀರ್ತಿಗೆ ಅಶ್ವಿನ್ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರು ಪಂದ್ಯಗಳಲ್ಲಿ ಕೇವಲ 1 ವಿಕೆಟ್ ಪಡೆದಿದ್ದು ಅಶ್ವಿನ್. 53 ರನ್ಗಳನ್ನು ನೀಡಿದ್ದರು. ಹಿಂದಿನ ಟೆಸ್ಟ್ ಸರಣಿಯಲ್ಲಿಯೂ ಕಳಪೆ ಫಾರ್ಮ್ ತೋರಿಸಿದ್ದ ಅಶ್ವಿನ್ ಅಂತರ್ ರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಗುಡ್ಬಾಯ್ ಹೇಳಿದ್ದಾರೆ.
39 ವರ್ಷದ ಅಶ್ವಿನ್ ಅಂತರ್ ರಾಷ್ಟ್ರೀಯ ಟೆಸ್ಟ್ ವೃತ್ತಿ ಜೀವನದಲ್ಲಿ 6 ಶತಕಗಳು ಮತ್ತು 14 ಅರ್ಧಶತಕಗಳೊಂದಿಗೆ 3000ಕ್ಕೂ ಹೆಚ್ಚು ರನ್ಗಳನ್ನು ಗಳಿಸಿ ಭಾರತದ ಪ್ರಮುಖ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದ ಅಶ್ವಿನ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ ಮತ್ತು ಈ ಬಾರಿಯ 2025ರ ಐಪಿಎಲ್ನಲ್ಲಿ ಚೆನೈ ಪರ ಆಟವಾಡಲಿದ್ದಾರೆ ಎಂದು ತಿಳಿದು ಬಂದಿದೆ.