ದಾವಣಗೆರೆ : ಕರ್ತವ್ಯದಲ್ಲಿದ್ದಾಗಲೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು. ವಿಜ್ಞಾನ ಶಿಕ್ಷಕ ಕೆ.ನಾಗರಾಜ್ ಕರಿಗೌಡ(48) ಎಂಬುವವರು ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :
ದಾವಣಗೆರೆ ಜಿಲ್ಲೆಯ ಮಾಯಕೊಂಡದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು. ಮಕ್ಕಳಿಗೆ ಪಾಠ ಮಾಡಿ ತರಗತಿಯಿಂದ ಹೊರಗೆ ಬರುತ್ತಿದ್ದಂತೆ ಶಿಕ್ಷಕ ನಾಗರಾಜ್ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೆ ಎಚ್ಚೆತ್ತ ಸಹದ್ಯೋಗಿಗಳು ಶಿಕ್ಷಕನನ್ನು ಸಮೀಪದ ಪ್ರಾಥಮಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇಲ್ಲಿ ಸರಿಯಾದ ಚಿಕಿತ್ಸೆ ಸಿಗದ ಕಾರಣ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಮಾಡುವಾಗಲೆ ಶಿಕ್ಷಕ ನಾಗರಾಜ್ ಮೃತಪಟ್ಟಿದ್ದಾರೆ. ಶಿಕ್ಷಕನ ಸಾವಿಗೆ ಶಾಲಾ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.