ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದಿರುವ ನಟ ದರ್ಶನ್ ಚಿಕಿತ್ಸೆಗಾಗಿ ಮೈಸೂರಿಗೆ ತೆರಳಲು ಅವಕಾಶ ನೀಡಬೇಕು ಎಂದು ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.
ಇದನ್ನೂ ಓದಿ : ಹೆಬ್ಬಾಳ್ಕರ್ ಮೇಲೆ ಅವಹೇಳನಕಾರಿ ಪದ ಬಳಕೆ ಆರೋಪ : ಸಿ.ಟಿ ರವಿ ಕಾರಿಗೆ ಮುತ್ತಿಗೆ
ರೆಗ್ಯೂಲರ್ ಬೇಲ್ ಪಡೆದು ಹೊರಬಂದಿರುವ ನಟ ದರ್ಶನ್ ನೆನ್ನೆಯಷ್ಟೆ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ನಡುವೆಯೆ ದರ್ಶನ್ ಸೆಷನ್ಸ್ ಕೋರ್ಟ್ಗೆ ಮೈಸೂರಿಗೆ ತೆರಳಲು ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದು. 4 ವಾರಗಳ ಕಾಲ ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿದ್ದಾರೆ. ಇದರ ಮಧ್ಯದಲ್ಲಿ ನ್ಯಾಯಾಲಯ ಅಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ SPP ಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ದರ್ಶನ್ಗೆ ರೆಗ್ಯೂಲರ್ ಜಾಮೀನು ನೀಡಿ ಆದೇಶ ಹೊರಡಿಸಿರುವ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿದೆ. ಇದೇ ಕಾರಣಕ್ಕೆ ದರ್ಶನ್ ಮೈಸೂರಿಗೆ ತೆರಳಿ ಚಿಕಿತ್ಸೆ ಪಡೆಯಲು ನ್ಯಾಯಾಲಯದ ಬಳಿ ಅರ್ಜಿ ಸಲ್ಲಿಸಿದ್ದಾರೆ.