Thursday, December 19, 2024

ಹೆಬ್ಬಾಳ್ಕರ್​ ಮೇಲೆ ಅವಹೇಳನಕಾರಿ ಪದ ಬಳಕೆ ಆರೋಪ : ಸಿ.ಟಿ ರವಿ ಕಾರಿಗೆ ಮುತ್ತಿಗೆ

ಬೆಳಗಾವಿ : ಸುವರ್ಣ ಸೌದದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ರಣಾಂಗಣವಾಗಿ ಬದಲಾಗಿದ್ದು. ಪರಿಷತ್​ ಸದಸ್ಯ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಸಿ.ಟಿ ರವಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ವಿಧಾನ ಪರಿಷತ್​ ಕಲಾಪದಲ್ಲಿ ಅಂಬೆಡ್ಕರ್​ ವಿಷಯಕ್ಕೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ದ ಸಿ.ಟಿ ರವಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು. ಲಕ್ಷ್ಮೀ ಹೆಬ್ಬಾಳ್ಕರ್​ ಮತ್ತು ಉಳಿದ ಕಾಂಗ್ರೆಸ್​ ಸದಸ್ಯರು ಸಭಾಪತಿಗೆ ದೂರು ನೀಡಿದ್ದಾರೆ.

ಇದೇ ಕಾರಣಕ್ಕೆ ಬೆಳಗಾವಿಯ ಸುವರ್ಣ ಸೌದದ ವಿಐಪಿ ಗೇಟ್​​ನಲ್ಲಿ ಹೈಡ್ರಾಮ ನಡೆದಿದ್ದು. ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಸಿ.ಟಿ ಬರುತ್ತಿದ್ದಂತೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸಿಟಿ ರವಿಯ ಪೋಟೋಗೆ ಚಪ್ಪಲಿಯಲ್ಲಿ ಹೊಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಕಾರರು. ಸಿಟಿ. ರವಿಯನ್ನು ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

 

RELATED ARTICLES

Related Articles

TRENDING ARTICLES