ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು. ಭಾರತೀಯ ಸುರಕ್ಷಾ ಸಂಹಿತಿಯ ಸೆಕ್ಷನ್ 75 ಮತ್ತು 79 ರಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ದೊರೆತಿದೆ.
ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ಸಿ.ಟಿ ರವಿ ಮೇಲೆ ಪ್ರಕರಣ ದಾಖಲಾಗಿದ್ದು. ಸಿ.ಟಿ ರವಿ ಬಂಧನವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸಿ.ಟಿ ರವಿ ಮೇಲೆ ಹಲ್ಲೆಗ ಯತ್ನ !
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರವಾಗಿ ಇಂದು ಸುವರ್ಣ ಸೌದ ಕೆಂಡದಂತೆ ಬದಲಾಗಿದ್ದು. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ನಕಲಿ ಐಡಿ ಕಾರ್ಡ ಧರಿಸಿ ಬಂದಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಪಿ.ಎ ಸಂಗಮೇಶ್ ಸೇರಿದಂತೆ ಅನೇಕ ಬೆಂಬಲಿಗರು ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದು. ಕೂದಲೆಳೆ ಅಂತರದಲ್ಲಿ ಸಿ.ಟಿ ರವಿ ಪಾರಾಗಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಾರ್ಷಲ್ಗಳು ಉದ್ರಿಕ್ತರನ್ನು ತಡೆದಿದ್ದು. ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಸ್ಥಳಕ್ಕೆ ಬೆಳಗಾವಿ ಪೊಲೀಸ್ ಆಯುಕ್ತ ಯಡಮಾರ್ಟಿನ್ ಭೇಟಿ ನೀಡಿದ್ದು. ಪರಿಸ್ಥಿತಿಯನ್ನು ಹತೋಟಿಗೆತರಲು ಯತ್ನಿಸುತ್ತಿದ್ದಾರೆ.