ಚಿಕ್ಕಮಗಳೂರು : ಸಿ.ಟಿ ರವಿ ಬಂಧನದ ವಿರುದ್ದವಾಗಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು. ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರಿನ ಅಜಾದ್ ಪಾರ್ಕ್ ಬಳಿ ಘಟನೆ ನಡೆದಿದ್ದು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಕಡಿಮೆ ಸಂಖ್ಯೆಯಲ್ಲಿ ಇದ್ದ ಪೊಲೀಸರು. ಈ ವೇಳೆ ಏಕಾಏಕಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಸಿ.ಟಿ.ರವಿ ಬೆಂಬಲಿಗರು ಬಂದಿದ್ದು. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು. ಎರಡು ಪಕ್ಷದ ಕಾರ್ಯಕರ್ತರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ ಬಿಜೆಪಿ ಕಾರ್ಯಕರ್ತ ಶಶಾಂಕ್ ಹೆರೂರು ಮೇಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಗಿಬಿದ್ದಿದ್ದು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶಶಾಂಕ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದು. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಮತ್ತೆ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.