ರಾಜಸ್ಥಾನ : ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ರಾಸಾಯನಿಕ ಸಾಗಿಸುತ್ತಿದ್ದ ಟ್ರಕ್‌ವೊಂದು ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದು, 37 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಹಲವು ಟ್ರಕ್‌ಗಳಿಗೆ ಬೆಂಕಿ ಆವರಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಬಂಕ್ರೋಟಾದ ಎಸ್‌ಎಚ್‌ಒ ಮನೀಶ್ ಗುಪ್ತಾ ಖಾಸಗಿ ವಾಹಿನಿಗೆ ತಿಳಿಸಿದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜಸ್ಥಾನ ಮುಖ್ಯಮಂತ್ರಿ ಸಿಎಂ ಭಜನ್‌ಲಾಲ್ ಶರ್ಮಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರೆ.
ಇದನ್ನೂ ಓದಿ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ : ಪೊಲೀಸರಿಂದ ಲಾಠಿ ಪ್ರಹಾರ !
ರಾಜಸ್ಥಾನ ಮುಖ್ಯಮಂತ್ರಿಯಿಂದ ಸಂತಾಪ ಸೂಚನೆ !
ಘಟನೆ ಕುರಿತು ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು “ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಬೆಂಕಿಯ ಘಟನೆಯಲ್ಲಿ ನಾಗರಿಕರ ಸಾವುನೋವುಗಳ ದುಃಖದ ಸುದ್ದಿಯನ್ನು ಕೇಳಲು ನನಗೆ ತುಂಬಾ ದುಃಖವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎಸ್‌ಎಂಎಸ್ ಆಸ್ಪತ್ರೆಗೆ ತೆರಳಿ, ತಕ್ಷಣ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಆಡಳಿತದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳೀಯ ಆಡಳಿತ ಮತ್ತು ತುರ್ತು ಸೇವೆಗಳು ಸಂಪೂರ್ಣ ಸಿದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿನ ನೀಡಿದ್ದಾರೆ .