ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿಯಲ್ಲಿ ಇಂದು ಕೂಡ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು. ಸಿ,ಟಿ ರವಿಯ ಪ್ರತಿಕೃತಿಗೆ ಸೀರೆ ಉಡಿಸಿ, ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನೆ ಆರಂಭವಾಗಿದ್ದು. ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸಿ,ಟಿ ರವಿಯ ಅಣಕು ಶವಯಾತ್ರೆ ನಡೆಸುವ ಮೂಲಕ ಹೆಬ್ಬಾಳ್ಕರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿ,ಟಿ ರವಿಯನ್ನು ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿರುವ ಪ್ರತಿಭಟನಾಕಾರರು. ಸಿ,ಟಿ ರವಿಯ ಪ್ರತಿಕೃತಿಗೆ ಸೀರೆ ಹುಡಿಸಿ, ಚಪ್ಪಲಿ ಹಾರ, ಸಾರಾಯಿ ಬಾಟೆಲ್ ಹಾರ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಸಿ,ಟಿ ರವಿಯ ಅಣಕು ಶವಯಾತ್ರೆ ನಡೆಸಿ. ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.