Monday, December 23, 2024

ಪ್ರಧಾನಿ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದ ಕುವೈತ್​ !

ಕುವೈತ್​ : ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇದು ಮೋದಿಗೆ ದೇಶವೊಂದು ನೀಡಿದ 20ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಇದನ್ನೂ ಓದಿ : ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು : ಆಸ್ಪತ್ರೆ ಮೇಲೆ ಕುಟುಂಬಸ್ಥರ ಆಕ್ರೋಶ !

‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಕುವೈತ್‌ನ ನೈಟ್‌ಹುಡ್ ಆರ್ಡರ್ ಆಗಿದೆ. ಇದನ್ನು ರಾಷ್ಟ್ರದ ಮುಖ್ಯಸ್ಥರು ಮತ್ತು ವಿದೇಶಿ ಸಾರ್ವಭೌಮರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ. ಈ ಹಿಂದೆ ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್ ಅವರಂತಹ ವಿದೇಶಿ ನಾಯಕರಿಗೆ ಪ್ರಶಸ್ತಿ ನೀಡಲಾಗಿದೆ. ಇದೀಗ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೂ ಈ ಪ್ರಶಸ್ತಿಯನ್ನು ನೀಡಿದ್ದಾರೆ.

RELATED ARTICLES

Related Articles

TRENDING ARTICLES