ಬೆಂಗಳೂರು : ದಿನ ಕಳೆದಂತೆ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಡಿಜಿಟಲ್ ಅರೆಸ್ಟ್ಗೆ ಹೆದರಿದ ಬೆಂಗಳೂರಿನ ಇಂಜಿನಿಯರ್ ಒಬ್ಬ ಸುಮಾರು 12 ಕೋಟಿ ಹಣವನ್ನು ಕಳೆದುಕೊಂಡಿದ್ದಾನೆ. ಹಣ ಕಳದುಕೊಂಡ ವ್ಯಕ್ತಿಯನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ವಿಜಯ್ ಕುಮಾರ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದನು. ಆದರೆ ಈತನಿಗೆ ಟ್ರಾಯ್ನಿಂದ ಅಪರಿಚಿತ ಕರೆಯೊಂದು ಬಂದಿದ್ದು. ಪೋನ್ ಕರೆಯಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ನ್ನು ಮನಿ ಲಾಂಡರಿಂಗ್ನಲ್ಲಿ ಬಳಸಿಕೊಳ್ಳಲಾಗಿದೆ. ನಿಮ್ಮ ಮೇಲೆ ಮುಂಬೈ ಕ್ರೈಂ ಬ್ರಾಂಚ್ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೆದರಿಸಿದ್ದಾರೆ.
ಇದನ್ನೂ ಓದಿ : ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೆ ಸಾ*ವು !
ಅಷ್ಟೆ ಅಲ್ಲದೆ ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಸುಮಾರು 6 ಕೋಟಿ ವಂಚನೆ ಆಗಿದೆ. ನಿಮ್ಮ ಮೇಲೆ ಸುಪ್ರೀಂ ಕೋರ್ಟ್ನಲ್ಲಿ ಕೇಸ್ ನಡಿತಾ ಇದೆ. ನಿಮ್ಮ ಮೇಲೆ ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ವೇಳೆ ಹಂತ ಹಂತವಾಗಿ ಹಣವನ್ನು ವಸೂಲಿ ಮಾಡಿದ್ದು. ಸುಮಾರು 11 ಕೋಟಿ 83 ಲಕ್ಷ ಹಣವನ್ನು ಹಾಕಿಸಿಕೊಂಡು ವಂಚನೆ ಮಾಡಿದ್ದಾರೆ.
ಘಟನೆ ಸಂಬಂಧ ಈಶಾನ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಇದರ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.