ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಮನಕಲಕುಚ ಘಟನೆ ನಡೆದಿದ್ದು. ಮಗನ ಸಾವಿನ ಸುದ್ದಿ ಕೇಳಿದ ತಾಯಿ ಸ್ಥಳದಲ್ಲೆ ಕುಸಿದು ಬಿದ್ದು, ಸಾವನ್ನಪ್ಪಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ.
ತಾಯಿ ಮಗನ ನಡುವಿನ ಭಾಂಧವ್ಯಕ್ಕೆ ದೇವರೆ ಕೊಳ್ಳಿ ಇಟ್ಟಿರುವ ಘಟನೆ ಮಂಡ್ಯದ ಮಳವಳ್ಳಿ ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ. ನೆಟ್ಕಲ್ ಗ್ರಾಮದ ಕೃಷ್ಣಮೂರ್ತಿ ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದನು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದನು.
ಇದನ್ನೂ ಓದಿ : ಹಾಸ್ಟೆಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಯುವತಿ !
ಈ ಸುದ್ದಿಯನ್ನು ತಾಯಿ ಮಹದೇವಮ್ಮನಿಗೆ ತಿಳಿಸಲಾಗಿತ್ತು, ಆದರೆ ಈ ಸುದ್ದಿಯನ್ನು ಕೇಳುತ್ತಿದ್ದಂತೆ ಮಹದೇವಮ್ಮನು ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದು. ಗ್ರಾಮಸ್ಥರು ತಾಯಿ, ಮಗ ಇಬ್ಬರನ್ನು ಒಂದೆ ಸ್ಥಳದಲ್ಲಿ ಅಕ್ಕ ಪಕ್ಕ ಅಂತ್ಯ ಸಂಸ್ಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ