ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು. ಇದರ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮದ್ ರೋಷನ್ ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೊಷಣೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಬೆಳಗಾವಿ ತಾಲೂಕಿನ ಶೈಕ್ಷಣಿಕ ವಲಯದ ಪ್ರಾಥಮಿಕ, ಫ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು. ಡಿ.26, 27 ಎರಡು ದಿನಗಳ ಕಾಲ ರಜೆಯನ್ನು ಘೋಷಣೆ ಮಾಡಿದ್ದಾರೆ. ಬೆಳಗಾವಿ ನಗರ ಮತ್ತು ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನಿತ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕಾರುಗಳ ನಡುವೆ ಭೀಕರ ಅಪಘಾತ : ನಾಲ್ವರು ಸಾ*ವು !
ಕಾಂಗ್ರೆಸ್ನಿಂದ ಗಣ್ಯರ ಆಗಮನ !
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ತುಂಬಿದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ದಂಡೆ ಹರಿದು ಬರಲಿದೆ ಎಂದು ಮಾಹಿತಿ ದೊರೆತಿದೆ.
ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಸೇರಿದಂತೆ
ಅನೇಕ ಸಚಿವರು,ಶಾಸಕರು ಆಗಮಿಸಿದ್ದಾರೆ. ಇದರ ಜೊತೆಗೆ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧೀ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ 140 ಜನ ಸಂಸದರು, ಹಾಲಿ ಸಿಎಂ, ಮಾಜಿ ಸಿಎಂಗಳ ಸಹ ಆಗಮಿಸಲಿದ್ದಾರೆ. ಈ ಸಮಾವೇಶವನ್ನು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಎಂಬ ಹೆಸರಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.