ದೇವನಹಳ್ಳಿ : ರಾಜ್ಯದಲ್ಲಿ ಕೊರೊನಾ ವೈರಸ್ ಪೋಲಿಸ್ ಸಿಬ್ಬಂದಿಗಳಿಗೆ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಬೇರೆ ಬೇರೆ ಮಾರ್ಗಗಳಿಂದ ಕೊರೊನಾ ವೈರಸ್ ಹರಡುತ್ತಿದೆ. ಆದ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೋಲಿಸ್ ಠಾಣೆಯ ಸಿಬ್ಬಂದಿ ಆರೋಪಿಯಿಂದ ಕೊರೊನಾ ವೈರಸ್ ಹಬ್ಬಿದೆ. ಕಳೆದ 22 ರಂದು ವಿಶ್ವನಾಥಪುರ ಪೋಲಿಸ್ ಠಾಣೆಯ ಸಿಬ್ಬಂದಿ ಬೆಂಗಳೂರು ಸಂಜಯ್ ನಗರದಲ್ಲಿ ಸರಗಳ್ಳನನ್ನು ಬಂಧಿಸಿದ್ದಾರೆ. ಬಂಧಿಸಿದ ನಂತರ ಆರೋಪಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆ ನಂತರ ಆರೋಪಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದ್ರೆ ಆರೋಪಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್ ಡೌನ್ ಮಾಡುವುದರ ಜೊತೆಗೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸ್ವಾಬ್ ಟೆಸ್ಟ್ ಮಾಡಿಸಲಾಗಿತ್ತು. ಇಂದು ಆರೋಪಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇಬ್ಬರಿಗೆ ಇಂದು ಕೊರೊನಾ ಪಾಸಿಟಿವ್ ಬಂದಿದೆ. ಇನ್ನೂ 30 ಕ್ಕೂ ಅಧಿಕ ಸಿಬ್ಬಂದಿಯ ವರದಿ ಬರಬೇಕಾಗಿದೆ. ಆದ್ರೆ ಸಿಬ್ಬಂದಿ ಸಾಕಷ್ಟು ಆತಂಕಕ್ಕೊಳಗಾಗಿದ್ದಾರೆ ಜೊತೆಗೆ ವರದಿ ತಡವಾಗಿ ಬರುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.