ಬೆಂಗಳೂರು : ರಾಜ್ಯದ ಮೋಸ್ಟ್ ವಾಂಟೆಡ್ ನಕ್ಸಲರು ಇಂದು ಕಾಡಿನಿಂದ ಹೊರಬಂದು ಸರ್ಕಾರದ ಮುಂದೆ ಶರಣಾಗುತ್ತಿದ್ದಾರೆ. ಈ ವಿಷಯದ ಬಗ್ಗೆ ಬಿಜೆಪಿಯ ಸುನೀಲ್ ಕುಮಾರ್ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು. ಕಾಂಗ್ರೆಸ್ ಸರ್ಕಾರದಲ್ಲಿ ಉಗ್ರರಿಗೆ, ನಕ್ಸಲರಿಗೆ ಸುಗ್ಗಿಕಾಲವಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ನಕ್ಸಲರ ಶರಣಾಗತಿಯ ಬಗ್ಗೆ ಬರೆದುಕೊಂಡಿರುವ ಸುನೀಲ್ ಕುಮಾರ್ ‘ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿಕಾಲ ಬರುತ್ತದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವನ್ನು ಸರ್ಕಾರ ಹೊದಗಿಸುತ್ತಿದೆ.
ಇದನ್ನೂ ಓದಿ : ಕಾಡಿನಿಂದ ಹೊರಬಂದ ಕೆಂಪು ಉಗ್ರರು : ಸರ್ಕಾರದ ಮುಂದೆ ಶರಣಾಗಲಿರೋ ನಕ್ಸಲರು !
ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ. ಸರ್ಕಾರದ ಈ ಕ್ರಮದಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.