Thursday, January 9, 2025

ಆಸ್ತಿ ವಿಚಾರಕ್ಕೆ ಜಗಳ : ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಭೀಕರ ಕೊ*ಲೆ !

ರಾಮನಗರ: ವ್ಯಕ್ತಿಯೋರ್ವ ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ರಾಮನಗರದ, ಕಗ್ಗಲೀಪುರದಲ್ಲಿ ನಡೆದಿದ್ದು. ಮೃತ ಮಹಿಳೆಯನ್ನು 32 ವರ್ಷದ ಜ್ಯೋತಿ ಎಂದು ಮಾಹಿತಿ ದೊರೆತಿದೆ. ಕೊಲೆ ಆರೋಪಿಯನ್ನು ಚಂದ್ರಶೇಖರ್​ ಎಂದು ಗುರುತಿಸಲಾಗಿದೆ.

ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಗ್ರಾಮದಲ್ಲಿ ಘಟನೆ ನಡೆದಿದ್ದು. 52 ವರ್ಷದ ಚಂದ್ರಶೇಖರ್​ ಜ್ಯೋತಿ ಎಂಬಾಕೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಆದರೆ ಅವರ ನಡುವೆ ಆಸ್ತಿ ವಿಚಾರಕ್ಕೆ ಜಗಳ ನಡೆದಿದ್ದು. ಈ ಜಗಳ ವಿಕೋಪಕ್ಕೆ ಹೋಗಿ ಚಂದ್ರಶೇಖರ್ ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ :ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಕಗ್ಗಲೀಪುರ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದರು. ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES