Friday, January 10, 2025

KSRTC ಬಸ್​ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಮಕ್ಕಳ ಸಾ*ವು !

ರಾಮನಗರ : KSRTC ಬಸ್​​ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ರಾಮನಗರ-ಕನಕಪುರ ಮುಖ್ಯ ರಸ್ತೆಯಲ್ಲಿನ  ಮೊಟ್ಟೆದೊಡ್ಡಿ ಗೇಟ್ ಬಳಿ ಘಟನೆ ನಡೆದಿದ್ದು. ರಾಮನಗರದ ಕಡೆಗೆ ಹೋಗುತ್ತಿದ್ದ ಬೈಕ್​ ಸವಾರರ ಬೈಕ್​ಗೆ ಕೆಎಸ್​​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿದ್ದು. ಡಿಕ್ಕಿಯ ರಭಸಕ್ಕೆ ಇಬ್ಬರು ಮಕ್ಕಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತ ಮಕ್ಕಳನ್ನು ಪ್ರತೀಕ್​ (5), ಭವ್ಯ(3) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಧು ಮತ್ತು ಗೋವಿಂದ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ರಾಮನಗರ ತಾಲ್ಲೂಕಿನ ಅಚ್ಚಲುದೊಡ್ಡಿಯ ಇರುಳಿಗರು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ತಿರುಪತಿಯ ಭೀಕರ ಕಾಲ್ತುಳಿತದಲ್ಲಿ ಕರ್ನಾಟಕದ ಓರ್ವ ಮಹಿಳೆ ಸಾ*ವು : ಈ ದುರಂತಕ್ಕೆ ಕಾರಣವೇನು ?

ಮೃತದೇಹಗಳನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES