ಚಾಮರಾಜನಗರ : ಬಂಡೀಪುರದಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದು. ಕೇರಳ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಘಟನೆ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕೇರಳ ರಾಷ್ಟ್ರೀಯ ಹೆದ್ದಾರಿ-766ರ ಮದ್ದೂರು ವಲಯದ ಕಗ್ಗಳದಹುಂಡಿ ಸಮೀಪ ಘಟನೆ ಘಟಿಸಿದ್ದು. ಆರೋಪಿ ಝಾಕೀರ್ ಎಂಬಾತ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ವೇಗವಾಗಿ ಬರುವ ವೇಳೆ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಜಿಂಕೆ ರಸ್ತೆಯಲ್ಲೆ ಸಾವನ್ನಪ್ಪಿದೆ. ಘಟನೆ ಬಗ್ಗೆ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಶಾಸಕ ದರ್ಶನ್ ಪುಟ್ಟಣಯ್ಯ ಅವಾಜ್ಗೆ ಬೆಚ್ಚಿ ಬಿದ್ದ ಹಾಸ್ಟೆಲ್ ವಾರ್ಡನ್ : ಕಾಲು ಕತ್ತರಿಸುವುದಾಗಿ ಬೆದರಿಕೆ
ಆರೋಪಿಯನ್ನು ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು, ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ದೊರೆತಿದೆ.