ಹುಬ್ಬಳ್ಳಿ : ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೆ ಮಗನೋರ್ವ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಕೊಲೆ ಮಾಡಿದ ಆರೋಪಿಯನ್ನು ಗಂಗಾಧರ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಕುಸುಗಲ್ ಗ್ರಾಮದಲ್ಲಿ ಘಟನೆ ನಡೆದಿದ್ದು. ಕೊಲೆಯಾದ ದುರ್ದೈವಿಗಳನ್ನು ಅಶೋಕ್ ಮತ್ತು ಶಾರವ್ವ ಎಂದು ಗುರುತಿಸಲಾಗಿದೆ. ಕೊಲೆಯಾಗಿರುವ ಅಶೋಕ್ ಎರಡನೇ ಹೆಂಡತಿಯ ಮಗನಾದ ಗಂಗಧರ್ ಎಂಬಾತ ಕೊಲೆ ಮಾಡಿದ್ದು. ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೊಲೆ ಮಾಡಿದ ನಂತರ ಆರೋಪಿ ಗಂಗಾಧರ್ ಪರಾರಿಯಾಗಿದ್ದಾನೆ.
ಇದನ್ನೂ ಓದಿ : ಸೊಸೆಯಾಗಬೇಕಾದವಳನ್ನು ಮದುವೆಯಾದ ಅಪ್ಪ : ಸನ್ಯಾಸಿಯಾಗಲು ನಿರ್ಧರಿಸಿದ ಮಗ !
ಘಟನೆ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.