Saturday, January 11, 2025

ಚೀನಿ ವೈರಸ್​ ಆತಂಕ: 10 ತಿಂಗಳ ಮಗುವಿನಲ್ಲಿ HMP ವೈರಸ್​ ಪತ್ತೆ !

ಗುವಾಹಟಿ: ದೇಶಾದ್ಯಂತ ಸದ್ದು ಮಾಡುತ್ತಿರುವ ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದಿಬ್ರುಗಡ್ನಲ್ಲಿರುವ  ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ಕೊರೋನಾದ ನಂತರ ಚೀನಾದಲ್ಲಿ ಮತ್ತೊಂದು ವೈರಸ್​ ಮರಣ ಮೃದಂಗ ಬಾರಿಸುತ್ತಿದೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದ್ದವು. ಇದರ ಬೆನ್ನಲ್ಲೆ ಬೆಂಗಳೂರಿನಲ್ಲಿ ದೇಶದ ಮೊದಲ HMPV ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದವು. ಇದಾದ ನಂತರ ದೇಶದ ಅನೇಕ ಭಾಗದಲ್ಲಿ ಸುಮಾರು 8ಕ್ಕು ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು.

ಇದನ್ನೂ ಓದಿ :ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ : ಡಿ.ಕೆ.ಶಿವಕುಮಾರ್

ಇದರ ಬೆನ್ನಲ್ಲೆ ಅಸ್ಸಾಂನಲ್ಲಿ 10 ತಿಂಗಳ ಮಗುವಿನಲ್ಲಿ HMP ವೈರಸ್​ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆಯಷ್ಟೇ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳನ್ನು ಪರಿಗಣಿಸಿ ಪರೀಕ್ಷೆಗೆ ಒಳಪಡಿಸಿದ ನಂತರ ಮಗುವಿನಲ್ಲಿ ಹೆಚ್‌ಎಂಪಿವಿ ಸೋಂಕು ಇರೋದು ದೃಢವಾಗಿದೆ ಎಂದು AMCH ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಹೇಳಿದ್ದಾರೆ.

ಈ ವರ್ಷದಲ್ಲಿ ಅಸ್ಸಾಂನಲ್ಲಿ ಕಾಣಿಸಿಕೊಂಡ ಮೊದಲ ಸೋಂಕು ಇದಾಗಿದೆ. ಆದಾಗ್ಯೂ ಇದು ಹೊಸದೇನಲ್ಲ ಎಂದು ವೈದ್ಯರು ಹೇಳಿದ್ದಾರೆ. 2001ರಲ್ಲಿ ಮೊದಲಬಾರಿಗೆ ಗುರುತಿಸಲಾದ ಈ ವೈರಸ್‌ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. 2014ರಲ್ಲಿ ಅಸ್ಸಾಂನಲ್ಲಿ ದಿಬ್ರುಗಢ ಜಿಲ್ಲೆಯಲ್ಲಿ 110 ಪ್ರಕರಣಗಳನ್ನು ಗುರುತಿಸಿದ್ದೆವು. ಪ್ರತಿ ವರ್ಷವೂ ಇದು ಪತ್ತೆಯಾಗುತ್ತಿದೆ. ಜನ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿದ್ರೆ ಸಾಕು ಎಂದು ವೈದ್ಯರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES