Wednesday, January 15, 2025

ಮತ್ತೊಂದು ಪೈಶಾಚಿಕ ಕೃತ್ಯ : 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ !

ಬಳ್ಳಾರಿ : ಸಂಡೂರು ತಾಲೂಕಿನ ತೋರಣಗಲ್ ಗ್ರಾಮದಲ್ಲಿ ಐದು ವರ್ಷದ ಬಾಲಕಿ ಮೇಲೆ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ. ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್‌) ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ. ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ :ಭೀಕರ ರಸ್ತೆ ಅಪಘಾತ : ಕಾರಿನಡಿ ಸಿಲುಕಿದ ಬೈಕ್​ ಸವಾರನಿಗೆ ಗಂಭೀರ ಗಾಯ !

ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಅಂಗಗಳಿಗೆ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ.
ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ. ಮಗುವಿನ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES