ಮೈಸೂರು: ಜಿಲ್ಲೆಯ ವಿಶ್ವ ಪ್ರಸಿದ್ದ ನಂಜನಗೂಡಿನ ನಂಜುಡೇಶ್ವರ ದೇವಾಲಯಕ್ಕೆ ಹರಕೆ ರೂಪದಲ್ಲಿ ನೀಡಿದ್ದ ಹಸುವಿನ ಬಾಲಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದು. ಹಸುವಿನ ಬಾಲಕ್ಕೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ.
ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಘಟನೆ ನಡೆದಿದ್ದು. ನಂಜನಗೂಡಿನ ನಂಜುಡೇಶ್ವರ ದೇವಾಲಯಕ್ಕೆ ಹರಕೆ ರೂಪದಲ್ಲಿ ಹಸುಗಳನ್ನ ದಾನವಾಗಿ ನೀಡಿದ್ದ ಹಸುವಿನ ಬಾಲಕ್ಕೆ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ಆದಿಪುರುಷ್ ಖ್ಯಾತಿಯ ಸೈಫ್ ಅಲಿಖಾನ್ಗೆ ಚಾಕು ಇರಿತ : ಮೂವರು ಆರೋಪಿಗಳು ಬಂಧನ !
ರಸ್ತೆಯಲ್ಲಿ ನಿಂತಿದ್ದ ಹಸುಗಳನ್ನು ಕಳ್ಳತನ ಮಾಡಲು ಯತ್ನಿಸುವ ವೇಳೆ ಘಟನೆ ನಡೆದಿದ್ದು. ಈ ವೇಳೆ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಹಸುವಿನ ಬಾಲಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ಕುರಿತು ಇನ್ನಷ್ಟೆ ಹೆಚ್ಚಿನ ಮಾಹಿತಿ ದೊರಕಬೇಕಿದೆ.