Saturday, January 18, 2025

ಈ ಬಾರಿಯ ಹುಟ್ಟುಹಬ್ಬಕ್ಕೆ ಮನೆ ಬಳಿ ಬರಬೇಡಿ : ನಟ ದುನಿಯಾ ವಿಜಯ್​ ಪೋಸ್ಟ್​ !

ಇದೇ ಜನವರಿ 20ರಂದು ಕನ್ನಡ ಖ್ಯಾತ ನಟ ದುನಿಯಾ ವಿಜಯ್​ ಹುಟ್ಟುಹಬ್ಬವಿದ್ದು, ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಲು ಸಿದ್ದತೆ ಆರಂಭಿಸಿಕೊಂಡಿದ್ದರು. ಆದರೆ ನಟ ವಿಜಯ್​ ಕುಮಾರ್​ ಈ ಕುರಿತು ತಮ್ಮ ಎಕ್ಷ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು. ಈ ಬಾರಿಯ ಹುಟ್ಟುಹಬ್ಬಕ್ಕೆ ತಾನೂ ಅಭಿಮಾನಿಗಳ ಜೊತೆ ಇರಲು ಆಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ವಿಜಯ್​ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನೆಂದು ಬರೆದುಕೊಂಡಿದ್ದಾರೆ !

ನನ್ನ ಪ್ರೀತಿಯ ಅಭಿಮಾನಿಗಳೇ..
ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ , ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ.
ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ. ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ. ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.

ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ.‌ ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ.
ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ.
ಧನ್ಯವಾದಗಳು….

ಈ ಮೇಲಿನ ರೀತಿಯಲ್ಲಿ ನಟ ವಿಜಯ್​ ಕುಮಾರ್​ ತಮ್ಮ ಎಕ್ಷ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES