ಬಳ್ಳಾರಿ: ಬೆಳ್ಳಂಬೆಳಗ್ಗೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಬಸ್ ನಿಲ್ದಾಣದಲ್ಲೇ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 65 ವರ್ಷದ ಪಾಂಡು ಎನ್ನುವ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ಸಂಡೂರು ಪುರಸಭೆಯ ಜನನಿಬಿಡ ಬಸ್ ನಿಲ್ದಾಣದಲ್ಲೇ ವ್ಯಕ್ತಿ ನೇಣುಹಾಕಿಕೊಂಡಿದ್ದಾನೆ. ಸಂಡೂರು ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮಾಡ್ತಿದಾರೆ. ವ್ಯಕ್ತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಟಾಬಯಲು ಪ್ರದೇಶ ಬಸ್ ನಿಲ್ದಾಣದಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳ್ಳಂಬೆಳಗ್ಗೆ ಪ್ರಯಾಣಿಕರಲ್ಲಿ ದಿಗಿಲು ಹುಟ್ಟಿಸಿದೆ. ನಸುಕಿನಲ್ಲಿ ಘಟನೆ ಸಂಭವಿಸರಬಹುದೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು. ಅತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ