ಹಾಸನ : ಕಾಂತಾರ ಸಿನಿಮಾ ತಂಡಕ್ಕೆ ಸಾಲು ಸಾಲು ಅಡೆತಡೆಗಳು ಎದುರಾಗುತ್ತಿದ್ದು. ಇದೀಗ ಹಾಸನದಲ್ಲಿ ಅರಣ್ಯ ನಾಶ ಮಾಡಿ ಸಿನಿಮಾದ ಚಿತ್ರೀಕರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು. ಕೂಡಲೇ ಚಿತ್ರೀಕರಣವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರೂರು ಗ್ರಾಮದ ಬಳಿ ಘಟನೆ ನಡೆದಿದ್ದು. ಕಳೆದ ಕೆಲ ದಿನಗಳಿಂದ ಇಲ್ಲಿ ಕಾಂತಾರ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಗೋಮಾಳ ಜಾಗದಲ್ಲಿ ಚಿತ್ರೀಕರಣಕ್ಕೆ ಅನುಮತಿ ಪಡೆದಿರುವ ಚಿತ್ರ ತಂಡ, ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣಕ್ಕೆ ಯಾವೆಲ್ಲ ಪರವಾನಿಗೆಯನ್ನು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ನೀಡಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೆಟ್ರೋ ಹಳಿ ಮೇಲೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ನಿವೃತ್ತ ಯೋಧ !
ಜೊತೆಗೆ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಾಕುತ್ತಿದ್ದಾರೆ. ಇದರಿಂದ ಕಾಡು ಪ್ರಾಣಿಗಳು ಜನ ವಸತಿ ಪ್ರದೇಶಕ್ಕೆ ಬರುತ್ತಿವೆ ಎಂದು ಆರೋಪಿಸಲಾಗಿದೆ. ಇದರಿಂದ ಚಿತ್ರ ತಂಡ ಕೂಡಲೇ ಚಿತ್ರೀಕರಣವನ್ನು ಸ್ಥಗಿತಗೊಳಿಸಿ ಪರಿಸರ ಉಳಿಸಬೇಕು ಎಂದು ತಾಲ್ಲೂಕು ಆಡಳಿತ ಮುಂದಾಗಬೇಕು, ಇಲ್ಲವಾದರೆ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.