ರಾಯಚೂರು: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ನಡೆದಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷವೆ ಕಾರಣ ಎಂದು ಶಂಕಿಸಲಾಗಿದೆ.
ಅಪಘಾತದಲ್ಲಿ ಮೂವರು ವಿಧ್ಯಾರ್ಥಿಗಳು ಸಾವನ್ನಪ್ಪಿದ್ದು. ಓರ್ವ ಚಾಲಕ ಸೇರಿದಂತೆ ಮೂವರು ವಿಧ್ಯಾರ್ಥಿಗಳು ಸಾವನ್ನಪ್ಪಿದ್ದಾನೆ. ಮೃತರನ್ನು ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಸಾ*ವು : ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ !
14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಟ್ರಾಫಿಕ್ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು. ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತ ಸುದ್ದಿ ತಿಳಿದ ಮಂತ್ರಾಲಯದ ಶ್ರೀಗಳು ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.