ದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಧಾನಸಭೆ ಚುನಾವಣೆಯ ದಿನದಂದೇ ಪುಣ್ಯ ಸ್ನಾನ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ದೊರೆತಿದೆ.
ಪ್ರಯಾಗ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ವಿಶ್ವದ ಗಮನ ಸೆಳೆಯುತ್ತಿದೆ. ಈ ಕುಂಭಕ್ಕೆ ವಿಶ್ವದ ಅನೇಕ ಭಾಗಗಳಿಂದ ಪ್ರವಾಸಿಗರು, ಭಕ್ತರು ಭೇಟಿ ನೀಡುತ್ತಿದ್ದು. ಈ ಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಭೇಟಿ ನೀಡಿ ಪುಣ್ಯಸ್ನಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಅದು ಕೂಡ ರಾಷ್ಟ್ರ ರಾಜಧಾನಿ ದೆಹಲಿ ಚುನಾವಣೆಯ ದಿನವೇ (ಫೆ.05) ಮೋದಿ ಕುಂಭಕ್ಕೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ : ATM ದರೋಡೆ ಪ್ರಕರಣ : ‘ನನಗೆ ಪುರ್ನಜನ್ಮ ಸಿಕ್ಕಿದೆ’ ಎಂದ ಗಾಯಾಳು ಸಿಬ್ಬಂದಿ !