Sunday, February 23, 2025

ಆಸ್ಪತ್ರೆಗೆ ಕರೆದೊಯ್ದಿದ್ದ ಆಟೋ ಚಾಲಕನಿಗೆ ಧನ್ಯವಾದ ಅರ್ಪಿಸಿದ ನಟ ಸೈಪ್​ ಅಲಿಖಾನ್​ !

ಮುಂಬೈ : ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಸಂದರ್ಭದಲ್ಲಿ ತಮ್ಮನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಆಟೊ ಚಾಲಕ ಭಜನ್ ಸಿಂಗ್ ರಾಣಾ ಅವರನ್ನು ಬಾಲಿವುಡ್ ನಟ ಸೈಫ್ ಅಲಿ ಖಾನ್ ಭೇಟಿಯಾಗಿ ಧನ್ಯವಾದ ಹೇಳಿದ್ದಾರೆ ಎಂದು ಮಾಹಿತಿ ದೊರೆತಿದೆ.

ನಟ ಸೈಫ್ ಅಲಿ ಖಾನ್ ಅವರು ಐದು ದಿನಗಳ ಚಿಕಿತ್ಸೆ ಬಳಿಕ ಮಂಗಳವಾರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಭಜನ್ ಸಿಂಗ್ ರಾಣಾ ಅವರನ್ನು ಆಸ್ಪತ್ರೆಗೆ ಕರೆಸಿಕೊಂಡಿದ್ದ ಸೈಫ್, ಕೆಲಕಾಲ ಮಾತುಕತೆ ನಡೆಸಿದ್ದಾರೆ. ಗಾಯಗೊಂಡಿದ್ದ ವೇಳೆ ತಮ್ಮನ್ನು ಕೆಲವೇ ನಿಮಿಷಗಳಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಕ್ಕೆ ಭಜನ್ ಸಿಂಗ್ ರಾಣಾ ಅವರಿಗೆ ಸೈಫ್ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಸುದೀಪ್​ಗೆ ಅತ್ಯುತ್ತಮ ನಟ ಪ್ರಶಸ್ತಿ !

ಜತೆಗೆ, ಅವರೊಂದಿಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ರಾಣಾ ಜತೆ ಸೈಫ್ ಸಂತಸ ಹಂಚಿಕೊಳ್ಳುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸೈಫ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಕ್ಕಾಗಿ ಭಜನ್ ಸಿಂಗ್ ರಾಣಾ ಅವರಿಗೆ ಸಂಸ್ಥೆಯೊಂದು 11,000 ಬಹುಮಾನ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಜತೆಗೆ, ಸೈಫ್ ಅವರ ಕಡೆಯಿಂದಲ್ಲೂ ರಾಣಾಗೆ ಸೂಕ್ತ ಬಹುಮಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES