Thursday, January 23, 2025

ರಸ್ತೆ ಬದಿ ನಿಂತಿದ್ದ ಲಾರಿಗೆ KSRTC ಬಸ್​ ಡಿಕ್ಕಿ : 10ಕ್ಕೂ ಹೆಚ್ಚು ಜನರಿಗೆ ಗಾಯ !

ಕಾರ್ಕಳ :  ರಸ್ತೆ ಬದಿಯಲ್ಲಿ ನಿಂತಿದ್ದ ಮಿ ಟೆಂಪೋಗೆ ಸರ್ಕಾರಿ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ 10ಕ್ಕು ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಕಾರ್ಕಳದ ಸಾಣೂರಿನಲ್ಲಿ ನಡೆದಿದ್ದು. ಅಪಘಾತ ಪರಿಣಾಮ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್​ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ :ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಎಸೆದಿದ್ದಕ್ಕೆ ಜಗಳ : ಕೊ*ಲೆಯಲ್ಲಿ ಅಂತ್ಯ !

ಚಿಕ್ಕೋಡಿ ಡಿಪೊಗೆ ಸೇರಿದ ಬಸ್ ಬೆಳಗಾವಿ ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದಾಗ ಸಾಣೂರು ರಾಮ ಮಂದಿರದ ಬಳಿ ನಿಂತಿದ್ದ ಟೆಂಪೊಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಬಸ್​ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದು. ಗಾಯಾಳುಗಳನ್ನು ಸ್ಥಳೀಯರು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES