ಚಿಕ್ಕೊಡಿ : ಭೀಕರ ರಸ್ತೆ ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದ್ದು. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್ಗೆ ನರೇಗಾ ಕೆಲಸಕ್ಕೆ ಹೊರಟಿದ್ದ ನರೇಗಾ ಕಾರ್ಮಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ನಾನು ಸಾಯೋತನಕ ಅವನನ್ನು ಸ್ನೇಹಿತನಾಗಿಯೇ ನೋಡುತ್ತೇನೆ : ಜರ್ನಾಧನ ರೆಡ್ಡಿ !
ಕಾರ್ಮಿಕರನ್ನು ತುಂಬಿಕೊಂಡು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ, ಅಡ್ಡ ಬರುತ್ತಿದ್ದ ಬೈಕ್ಗೆ ಆಗುವ ಸಂಭಾವ್ಯ ಅಪಘಾತವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ ಗಾಡಿಯಲ್ಲಿ ಸುಮಾರು 30 ಕಾರ್ಮಿಕರಿದ್ದು. ಇವರಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ, ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.