ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ ಎಂದು ಮಾಹಿತಿ ಲಭಸಿದೆ.
ಪೊಲೀಸರು ಜಪ್ತಿ ಮಾಡಿ ಖಾಲಿ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದ್ದು. ಬೆಂಕಿ ಅವಘಡದಲ್ಲಿ ಈಗಾಗಲೇ ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ ಎಂದು ಮಾಹಿತಿ ಲಭಿಸಿದೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳವ ಸಂಭವವಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಮೂವರು ಸಾ*ವು !
ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಬೆಳಗ್ಗೆ ಬೆಂಕಿ ಬಿದ್ದಿದೆ. ಯಾರೋ ಸಿಗರೇಟ್ ಹಚ್ಚಿ ಬೆಂಕಿ ಕಡ್ಡಿಯನ್ನು ಒಣಗಿದ ಹುಲ್ಲಿನ ಮೇಲೆ ಎಸೆದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.