ಬೆಳಗಾವಿ : ಪ್ರಯಾಗ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ ರಾಜ್ಯದ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ತಾಯಿ,ಮಗಳನ್ನು ಜ್ಯೋತಿ ಹತ್ತರವಾಠ ಮತ್ತು ಮೇಘಾ ಹತ್ತರವಾಠ ಎಂದು ಗುರುತಿಸಲಾಗಿದೆ.
ತಡರಾತ್ರಿ 2 ಗಂಟೆ ಸುಮಾರಿಗೆ ಕುಂಭಮೇಳದ ಸೆಕ್ಟರ್ 2ರಲ್ಲಿ ಉಂಟಾದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು, 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಗಾಯಾಳುಗಳನ್ನು ಕರ್ನಾಟಕದ ಬೆಳಗಾವಿ ಮೂಲದ ತಾಯಿ-ಮಗಳು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ಹಾಲು ಮೊಸರು ಸಿಗೋದು ಡೌಟ್: KMF ಆಡಳಿತ ಮಂಡಳಿ ವಿರುದ್ದ ತೊಡೆ ತಟ್ಟಿದ ನೌಕರರು !
ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ಸ್ನಲ್ಲಿ ಒಟ್ಟು 13 ಮಂದಿ ಪ್ರಯಾಣಿಸಿದ್ದರು. ಇದರಲ್ಲಿ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತಾರವಠ & ಮಗಳು ಮೇಘ ಹತ್ತಾರವಠ ಎಂಬುವವರು ಕೂಡ ಕುಂಭಮೇಳಕ್ಕೆ ಪ್ರಯಾಣಿಸಿದ್ದರು. ಆದರೆ ಇಂದು ಬೆಳಿಗ್ಗೆ ಉಂಟಾದ ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ದೃಡಪಡಿಸಿವೆ.