Wednesday, January 15, 2025

ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆ..!

ವಿಜಯಪುರ : ಕಳೆದ ಹದಿನೈದು ದಿನಗಳ ಹಿಂದೆ ಅಷ್ಟೇ ಚಿರತೆ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಈಗ ಮತ್ತೆ ವಿಜಯಪುರ ಜಿಲ್ಲೆಯಲ್ಲಿ ಡೆಡ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಈ ಚಿರತೆ ಓಡಾಟ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಶಿರಬೂರು ನದಿ ತೀರದಲ್ಲಿ ಚಿರತೆ ಓಡಾಟದ ದೃಶ್ಯ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ದೇವರ ಗೆಣ್ಣೂರು, ಶಿರಬೂರು, ಬಬಲಾದಿ, ಗುಣದಾಳ ಸೇರಿದಂತೆ ಹಲವು ಗ್ರಾಮಗಳಲ್ಲಿನ ಜನತೆಗೆ ಆತಂಕ ಶುರುವಾಗಿದೆ. ಕೆಲ ದಿನಗಳ ಹಿಂದಷ್ಟೇ ಜಾನುವಾರಗಳ ಬೇಟೆಯಾಡುತ್ತಿದ್ದ ಚಿರತೆಯನ್ನು ಕೊನೆಗೂ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿದು ಅದನ್ನು ಕಾಡಲ್ಲಿ ಬಿಟ್ಟಿದ್ದರು. ಅದರ ಬೆನ್ನಲ್ಲೆ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ಓಡಾಟದ ದೃಶ್ಯಾವಳಿ ಕಂಡು ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಚಿರತೆಯನ್ನ ಆದಷ್ಟು ಬೇಗ ಸೆರೆ ಹಿಡಿಯುವಂತೆ ಜನರು ಆಗ್ರಹಿಸುತ್ತಿದ್ದಾರೆ…

RELATED ARTICLES

Related Articles

TRENDING ARTICLES