Tuesday, February 4, 2025

ಅನೈತಿಕ ಸಂಬಂಧದ ಅನುಮಾನ: ಪತ್ನಿಯ ಕೊ*ಲೆ ಮಾಡಿ ಪೊಲೀಸರ ಮುಂದೆ ಶರಣಾದ ಗಂಡ

ದೇವನಹಳ್ಳಿ : ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸರ ಮುಂದೆ ಬಂದು ಶರಣಾಗಿದ್ದಾನೆ. ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಿಜಾಮುದ್ದೀನ್​ ಎಂದು ಗುರುತಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಮ್ಮರಸನಹಳ್ಳಿಯಲ್ಲಿ ಘಟನೆ ನಡೆದಿದ್ದು. ನಿಜಾಮುದ್ದೀನ ಎಂಬಾತ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸರ ಮುಂದೆ ಶರಣಾಗಿದ್ದಾನೆ. ನಿಜಾಮುದ್ದೀನ್​ ಮತ್ತು ರಾಬೀಯ ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿಜಾಮುದ್ದೀನ್​ಗೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಮೂಡಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ :

ತಮ್ಮರಸನಹಳ್ಳಿ ಗ್ರಾಮದ ಕೆರೆ ಸಮೀಪ ಘಟನೆ ನಡೆದಿದ್ದು. ಕೊಲೆ ಮಾಡಿದ ನಂತರ ಆರೋಪಿ ನಿಜಾಮುದ್ದೀನ್​ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾರೆ. ಮೃತರನ್ನು ಮೂಲತಃ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳು ಎಂದು ಗುರುತಿಸಿದ್ದು. ಕೊಲೆ ಆರೋಪಿ ವಿರುದ್ದ ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES