Wednesday, February 5, 2025

ಕುಂಭಮೇಳಕ್ಕೆ ತೆರಳಿದ್ದ ಕೊಪ್ಪಳದ ಯುವಕ ವಿದ್ಯುತ್​ ಪ್ರವಹಿಸಿ ಸಾ*ವು

ಕೊಪ್ಪಳ : ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಿದ್ದ ಕೊಪ್ಪಳದ ಯುವಕನೋರ್ವ ಸಾವನ್ನಪ್ಪಿದ್ದು. ರೈಲ್ವೇ ನಿಲ್ದಾಣದಲ್ಲಿ ವಿದ್ಯುತ್​​ ಪ್ರವಹಿಸಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಯುವಕನನ್ನು ಪ್ರವೀಣ್​ ಹೊಸಮನಿ ಎಂದು ಗುರುತಿಸಲಾಗಿದೆ.

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ ಕುಂಭಮೇಳಕ್ಕೆ ಎಂದು ತೆರಳಿದ್ದನು. ತ್ರಿವೇಣಿ ಸಂಗಮದಲ್ಲಿ ಸ್ನಾನ ಪವಿತ್ರ ಸ್ನಾನ ಮಾಡಿದ ಪ್ರವೀಣ್​ ಅಯೋದ್ಯೆಗೆ ತೆರಳಿ ರಾಮನ ದರ್ಶನ ಮಾಡಲು ಎಂದು ಗೋರಖ್​ ಪುರ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದನು. ಈ ವೇಳೆ ರೈಲ್ವೇ ನಿಲ್ದಾಣದಲ್ಲಿ ಪ್ರವೀಣ್​ ವಿದ್ಯುತ್​ ಪ್ರವಹಿಸಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಭಿನ್ನಮತಿಯರು ಮಾನಸಿಕ ಅಸ್ವಸ್ಥರಾಗಿದ್ದಾರೆ: ಎಂ.ಪಿ ರೇಣುಕಾಚಾರ್ಯ

ಇನ್ನು ಪ್ರವೀಣ್​ ಸಾವಿನ ಬಗ್ಗೆ ಸ್ಥಳೀಯ ಪೊಲೀಸರು ಪ್ರವೀಣ್ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಪ್ರವೀಣ್ ಮೃತದೇಹವನ್ನು ಗೋರಖ್​​ಪುರದಿಂದ ಕೊಪ್ಪಳಕ್ಕೆ ತರಲು ವ್ಯವಸ್ಥೆ ಮಾಡಿದ್ದಾರೆ. ಆದ್ರೆ, ರೈಲ್ವೆ ಸ್ಟೇಷನ್​ನಲ್ಲಿ ಅದು ಹೇಗೆ ವಿದ್ಯುತ್​ ತಗುಲಿತು? ಹೇಗೆ ಮೃತಪಟ್ಟಿದ್ದಾನೆ ಎನ್ನುವುದು ಮಾತ್ರ ಇನ್ನೂ ತಿಳಿದುಬಂದಿಲ್ಲ.

RELATED ARTICLES

Related Articles

TRENDING ARTICLES