ಆಸ್ಟೇಲಿಯಾ : 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ 13 ದಿನಗಳು ಬಾಕಿಯಿರುವಾಗಲೇ ಆಸೀಸ್‌ಗೆ ದೊಡ್ಡ ಆಘಾತ ಎದುರಾಗಿದೆ. ಆಸ್ಟೇಕಿಯಾದ ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ , ವೇಗಿ ಜೋಶ್ ಹ್ಯಾಜಲ್‌ವುಡ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ. ಮಿಚೆಲ್ ಮಾರ್ಷ್ ಸಹ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ನಡುವೆ ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಆಸೀಸ್ ತಂಡಕ್ಕೆ ಶಾಕ್ ಕೊಟ್ಟಿದ್ದಾರೆ.
ಇದನ್ನೂ ಓದಿ :ಎಮರ್ಜೆನ್ಸಿಯಲ್ಲಿ ಜೈಲಿನಲ್ಲಿದ್ದು ಪಾರ್ಟಿ ಕಟ್ಟಿದ್ದೇವೆ, ಒಂದೇ ಬಾರಿಗೆ ಲೀಡರ್ ಆಗಿಲ್ಲ: ಆರ್.ಅಶೋಕ್
ಇದೇ ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ನ ಟ್ರೋಫಿ ನಡೆಯಲಿದ್ದು. ದಿಗ್ಗಜ ಕ್ರಿಕೆಟ್ ತಂಡಗಳು ಸೆಣಸಾಡಲಿವೆ. ಆದರೆ ಸ್ಟಾರ್ ಅಲ್ರೌಂಡರ್ ಆಗಿರುವ ಸ್ಟೋಯ್ನಿಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವುದು ಕ್ರಿಕೆಟ್ ಲೋಕದಲ್ಲಿ ಚರ್ಚೆಯ ವಿಷಯವಾಗಿದೆ. ಗಾಯದ ಸಮಸ್ಯೆಯಿಂದ ಹೊರಗೆ ಉಳಿದಿರುವ ಜೋಶ್ ಹ್ಯಾಸೆಲ್ವುಡ್ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡಿದ್ದು. ನಾಯಕ ಪ್ಯಾಟ್ ಕಮಿನ್ಸ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ.
ಇನ್ನು ಸ್ಟೋಯ್ನಿಸ್ ಏಕದಿನ ಕ್ರಿಕೆಟ್ನಲ್ಲಿ 74 ಪಂದ್ಯಗಳನ್ನಾಡಿದ್ದಾರೆ. ಈ ಅವಧಿಯಲ್ಲಿ 93.96 ಸ್ಟ್ರೈಕ್ ರೇಟ್‌ನಲ್ಲಿ 1,495 ರನ್ ಗಳಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ನಡೆದಿದ್ದ ಪಂದ್ಯದಲ್ಲಿ ಅಜೇಯ 146 ರನ್ ಗಳಿಸಿದ್ದು ಏಕದಿನ ಸ್ವರೂಪದಲ್ಲಿ ಅತ್ಯಧಿಕ ಸ್ಕೋರ್ ಆಗಿತ್ತು. ಜೊತೆಗೆ 74 ಪಂದ್ಯಗಳಲ್ಲಿ 43.12 ಸರಾಸರಿಯಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ.