ದೇವನಹಳ್ಳಿ : ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು. ಓವರ್ಟೇಕ್ ಮಾಡಲು ಹೋಗಿ ಉಂಟಾದ ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು. ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎನ್.ಸತ್ಯವಾರ ಗೇಟ್ ಸಮೀಪ ಅಪಘಾತ ವಾಗಿದ್ದು. ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಓವರ್ಟೇಕ್ ಮಾಡಲು ಹೋದ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿಯಾಗಿದ್ದು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಇದನ್ನೂ ಓದಿ :ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಚ್.ಡಿ ದೇವೇಗೌಡ
ಕಾರಿನಲ್ಲಿದ್ದ 33 ವರ್ಷದ ಪ್ರಸಾದ್ ಎಂಬಾತ ಸ್ಥಳದಲ್ಲೆ ಸಾವನ್ನಪ್ಪಿದ್ದು. ಇಬ್ಬರು ವೈದ್ಯ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಳಿಸಿದ್ದು. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.