ಧಾರವಾಡ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನಿಗೆ ಧಾರವಾಡ ನ್ಯಾಯಪೀಠ ಬಿಗ್ ರಿಲೀಫ್ ನೀಡಿದೆ.
ಇದನ್ನೂ ಓದಿ :ಭೀಕರ ರಸ್ತೆ ಅಪಘಾತ: ಓರ್ವ ಸಾ*ವು, ದಂಪತಿಗೆ ಗಂಭೀರ ಗಾಯ
ಎಂ. ನಾಗಪ್ರಸನ್ನರ ಪೀಠ ತೀರ್ಪು ನೀಡಿದ್ದು. ಪೋಕ್ಸ್ ಪ್ರಕರಣದಲ್ಲಿ ಯಡಿಯೂರಪ್ಪರ ವಿರುದ್ದ ದಾಖಲಾಗಿದ್ದ ಎಫ್ಐಆರ್ನ್ನು ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಿಸಿದ ನ್ಯಾಯಾಲಯ ಯಡಿಯೂರಪ್ಪರಿಗೆ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಹಿನ್ನಲೆ !
2024ರ ಫೆಬ್ರವರಿಯಲ್ಲಿ ತನ್ನ ಬೆಂಗಳೂರಿನ ನಿವಾಸದಲ್ಲಿ 17 ವರ್ಷದ ಬಾಲಕಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ಆರೋಪ ಮಾಡಿದ್ದ ಸಂತ್ರಸ್ತೆ ತಾಯಿ ಮೇ 2024 ರಂದು ಶ್ವಾಸಕೋಶ ಕ್ಯಾನ್ಸರ್ ನಿಂದ ಮೃತಪಟ್ಟಿದ್ದರು.
ನಂತರ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಉಲ್ಲೇಖಿಸಿ ಸಂತ್ರಸ್ತೆಯ ಸಹೋದರ ಯಡಿಯೂರಪ್ಪ ಅವರನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.