ಕಲಬುರಗಿ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು. ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಬುರಗಿ ಜಿಲ್ಲೆ, ಅಫಜಲಪುರ ತಾಲೂಕಿನ, ಚೌಡಾಪುರ ತಾಂಡಾದ ಬಳಿ ಘಟನೆ ನಡೆದಿದ್ದು. ಕೆಪಿಆರ್ ಸಕ್ಕರೆ ಕಾರ್ಖಾನೆಗೆ ಹೋಗ್ತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಯಾಗಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ :ಬೆಂಗಳೂರಿನ ಚರಿತ್ರೆಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ: ಡಿ,ಕೆ ಶಿವಕುಮಾರ್
ಈ ಅಪಘಾತದಲ್ಲಿ ಕಲಬುರಗಿಯ ಪ್ರಶಾಂತ ನಗರ ನಿವಾಸಿ ವಿದ್ಯಾ (40) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈಕೆಯ ಪತಿ ನಿತಿನ್ ಕುಮಾರ್ ಮತ್ತು ಮಗಳು ವೈಷ್ಣವಿ ಗಂಭೀರವಾಗಿ ಗಾಯಗೊಂಡಿದ್ಧಾರೆ. ಮತ್ತೊಬ್ಬ ಪುತ್ರ ವೇದಾಂತ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು. ಘಟನೆ ಸಂಬಂಧ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.