ರಾಯಚೂರು: ಆಟೋ ಮತ್ತು ಕಾರಿನ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. 3ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದ ಆಶಿಹಾಳ ಬಳಿ ಘಟನೆ ನಡೆದಿದ್ದು. ಆಟೋದಲ್ಲಿ ಪ್ರಯಾಣಿಸುತ್ತಿದ್ದ 9 ಜನರಿಗೆ ತೀವ್ರ ಪೆಟ್ಟಾಗಿದೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು. 4ಜನರಿಗೆ ಕಾಲು ಮುರಿತವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ರಕ್ಷಿತಾ ಸಹೋದರ ನಟ ರಾಣಾ ಮದುವೆ: ಹರಿದು ಬಂದ ಗಣ್ಯರ ದಂಡು
ಗಾಯಾಳುಗಳನ್ನು ಸ್ಥಳೀಯ ಮುದಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು. ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.