ಹಾಸನ : ಪ್ರೇಯಸಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಮೃತ ಯುವಕನನ್ನು 22 ವರ್ಷದ ದರ್ಶನ್ ಎಂದು ಗುರುತಿಲಾಗಿದೆ.
ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಮೃತ ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ. ಬಿಎ ಮುಗಿಸಿದ್ದ ದರ್ಶನ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ.ಈ ವೇಳೆ ಅದೇ ಗ್ರಾಮದ ಮೋನಿಕಾ ಎಂಬಾಕೆಯನ್ನು ದರ್ಶನ್ ಪ್ರೀತಿಸುತ್ತಿದ್ದ. ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸಿ ಜೊತೆಯಲ್ಲಿ ಓಡಾಡಿದ್ದರು.
ಇತ್ತೀಚೆಗೆ ದರ್ಶನ್ ಮೋನಿಕಾಳ ಬಳಿ ಮದುವೆಯ ಬಗ್ಗೆ ಪ್ರಸ್ತಾಪಿಸಿದ್ದನು. ಆದರೆ ಮೋನಿಕಾ ಮದುವೆಯಾಗುವುದಿಲ್ಲ ಎಂದು ಈತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು. ಇದರಿಂದ ಮನನೊಂದಿದ್ದ ದರ್ಶನ್ ಫೆಬ್ರವರಿ 5ರಂದು ಮನೆಯಲ್ಲಿ ವಿಷ ಸೇವಿಸಿದ್ದನು. ವಿಷ ಸೇವಿಸಿ ವಾಂತಿ ಮಾಡುತ್ತಿದ್ದ ದರ್ಶನ್ನನ್ನು ನೋಡಿದ ಸ್ನೇಹಿತರಾದ ರವಿ ಮತ್ತು ಯಶ್ವಂತ್ ಏನಾಯಿತು ಎಂದು ಕೇಳಿದ್ದರು.
ಇದನ್ನೂ ಓದಿ:ನಿಜವಾಯ್ತು ಕಾಲಜ್ಙಾನಿ ನುಡಿದ ಭವಿಷ್ಯ: ದೆಹಲಿ ಚುನಾವಣೆಯಲ್ಲಿ ಎಎಪಿಗೆ ಸೋಲು
ಮೋನಿಕಾ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ, ನನ್ನ ಮನಸ್ಸಿಗೆ ಬೇಜಾರಾಗಿದೆ, ಹಾಗಾಗಿ ವಿಷ ಸೇವನೆ ಮಾಡಿರುವುದಾಗಿ ಹೇಳಿ ಕುಸಿದು ಬಿದ್ದಿದ್ದನು. ತಕ್ಷಣವೇ ಅರಸೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ನಂತರ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸದ್ದರು. ಆದರೆ ದರ್ಶನ್ ಚಿಕಿತ್ಸೆ ಫಲಕಾರಿಯಾಗದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ದರ್ಶನ್ ಕುಟುಂಬಸ್ಥರು ಮೋನಿಕಾ ವಿರುದ್ದ ದೂರು ನೀಡಿದ್ದು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.