Tuesday, February 11, 2025

ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಹಾರಿಬಿದ್ದ ಸವಾರರು: ಭಯಾನಕ ದೃಶ್ಯ ಸೆರೆ!

ಶಿವಮೊಗ್ಗ: ಅತೀ ವೇಗವಾಗಿ ಬಂದ ಕಾರೊಂದು ರಸ್ತೆ ಕ್ರಾಸ್‌ ಮಾಡುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರರು ಹಾರಿ ಬಿದ್ದ ಭಯಾನಕ ಅಪಘಾತ ಭಾನುವಾರ ಬೆಳಿಗ್ಗೆ ಸಂಭವಿಸಿತ್ತು. ಇದರ ಸಿಸಿಟಿವಿ ದೃಶ್ಯ ಪವರ್ ಟಿವಿಗೆ ಲಭ್ಯವಾಗಿದ್ದು. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ.

ಇದನ್ನೂ ಓದಿ :ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ: 14 ಕಾರ್ಮಿಕರಿಗೆ ಗಂಭೀರ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರದ ಬಿಹೆಚ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಈ ಭಯಾನಕ ದೃಶ್ಯ ಹತ್ತಿರದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ತೀವ್ರತೆಗೆ 17 ವರ್ಷದ ಸಿದ್ದು ಮೃತಪಟ್ಟಿದ್ದ, 19 ವರ್ಷದ ಭರತ್​ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES