ಬೆಂಗಳೂರು : ಸ್ಯಾಂಡಲ್ವುಡ್ನ ನಟಿ ಸಂಜನಾ ಗಲ್ರಾನಿಗೆ ಸಿಸಿಬಿ ಪೊಲೀಸರು ಶಾಕ್ ನೀಡಲು ಮುಂದಾಗಿದ್ದು. ಮಾಧಕ ವಸ್ತು ಸೇವನೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿಕೊಂಡು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ದಯಾನಂದ ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದು. ಇತ್ತೀಚೆಗೆ ಸಂಜನಾ ಗಲ್ರಾಣಿ ವಿರುದ್ದದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ. ಶೀಘ್ರವೇ ಅನುಮತಿ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.
ಇದನ್ನೂ ಓದಿ :ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಹಾರಿಬಿದ್ದ ಸವಾರರು: ಭಯಾನಕ ದೃಶ್ಯ ಸೆರೆ!
ಏನಿದು ಪ್ರಕರಣ !
2020ರ ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿ ಜೈಲಿನಿಂದ ಬಿಡುಗಡೆಗೊಳಿಸಿತ್ತು.
ನಟಿ ಸಂಜನಾ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ 2024ರ ಜೂನ್ನಲ್ಲಿ ಸಂಜನಾ ವಿರುದ್ದ ದಾಖಲಾಗಿದ್ದ ಎಫ್.ಐ.ಆರ್ನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.