ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಎಂದು ಛತ್ತೀಸಗಡದ ಕೊರ್ಬಾ ಜಿಲ್ಲೆಯಿಂದ ಭಕ್ತರು ಬೊಲೆರೊ ವಾಹನದಲ್ಲಿ ಪ್ರಯಾಗ್ರಾಜ್ಗೆ ಪ್ರಯಾಣಿಸಿದ್ದರು. ಈ ವೇಳೆ ಮಧ್ಯಪ್ರದೇಶದ ರಾಜ್ಗಡ್ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್ಗ ಬೊಲೆರೊ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೊಲೆರೋ ವಾಹನ ಸಂಪೂರ್ಣ ಜಖಂ ಆಗಿದ್ದು. ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 50 ಕೋಟಿ ಭಕ್ತರು, 3 ಲಕ್ಷ ಕೋಟಿ ಆದಾಯ: ಕುಂಭಮೇಳದಿಂದ ಹರಿದು ಬಂತು ಆದಾಯದ ಮಹಾಪೂರ
ಅಪಘಾತದ ಬಗ್ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದಿದ್ದು. ಘಟನೆಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದು. ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರಗಳನ್ನು ತ್ವರಿತವಾಗಿ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ವಾರದ ಆರಂಭದಲ್ಲಿ, ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮಹಾಕುಂಭದಿಂದ ಹಿಂತಿರುಗುತ್ತಿದ್ದ ಆಂಧ್ರಪ್ರದೇಶದ ಯಾತ್ರಿಕರು ಪ್ರಯಾಣಿಸುತ್ತಿದ್ದ ಮಿನಿ ಬಸ್, ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ 7 ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರು.
ಜ.29 ರಂದು ಮಹಾಕುಂಭಮೇಳ ಸ್ಥಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವತ್ತು ಜನರು ಸಾವನ್ನಪ್ಪಿದ್ದು ಅತ್ಯಂತ ದುರಂತವಾಗಿತ್ತು.