Thursday, April 24, 2025

ಕುರುಬೂರು ಶಾಂತಕುಮಾರ್​ಗೆ ಪಂಜಾಬ್​ನಲ್ಲಿ ಅಪಘಾತ: ಏರ್​​ಲಿಫ್ಟ್​​ ವ್ಯವಸ್ಥೆ ಮಾಡಿದ ಸೋಮಣ್ಣ

ಬೆಂಗಳೂರು : ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ ಏರ್​ ಲಿಫ್ಟ್​ ಮೂಲಕ ಬೆಂಗಳೂರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಶಾಂತಕುಮಾರ್​ ಬೆನ್ನುಮೂಳೆಗೆ ತೀವ್ ಗಾಯವಾಗಿದ್ದು. ಬೆಂಗಳೂರಿನಲ್ಲೆ ಚಿಕಿತ್ಸೆ ನೀಡಲು ಅವರನ್ನು ಏರ್​ಲಿಫ್ಟ್​ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಏನಿದು ಘಟನೆ !

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು  ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಈ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸದ್ದರು.

ಇದನ್ನೂ ಓದಿ :ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ರಾಜಣ್ಣ ಕೇಳಿದ್ದಾರೆ: ಸತೀಶ್​ ಜಾರಕಿಹೊಳಿ

ದೆಹಲಿಯಲ್ಲಿ ಕಳೆದ ಒಂದುವ ವರ್ಷದಿಂದ ಮತ್ತೆ ರೈತ ಪ್ರತಿಭಟನೆಗಳು ಆರಂಭವಾಗಿದ್ದು. ಈ ಸಂಬಂಧ ದೆಹಲಿಯಲ್ಲಿ ನಡೆಯುತ್ತಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES