ಹಾವೇರಿ : ಆಕಸ್ಮಿಕವಾಗಿ ದನದಕೊಟ್ಟಿಗೆ ಬೆಂಕಿ ಬಿದ್ದು 6 ಹಸು, 2 ಕರು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು. ಊರ ಹೊರೆಗಿದ್ದ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ದುರ್ಘಟನೆ ಸಂಭವಿಸಿದೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.
ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕಿನ, ಕಡೂರು ಗ್ರಾಮದಲ್ಲಿ ಘಟನೆ ನಡೆದಿದ್ದು. ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವ ರೈತರಿಗೆ ಸೇರಿದ ದನದಕೊಟ್ಟಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ 6 ಹಸುಗಳ, 2 ಕರುಗಳು ಸಜೀವ ದಹನವಾಗಿದ್ದು. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ :ಸೇತುವೆ ಮೇಲಿಂದ ಕೃಷ್ಣ ನದಿಗೆ ಉರುಳಿದ ಲಾರಿ: ಓರ್ವ ಸಾ*ವು, ಮತ್ತೊಬ್ಬನಿಗೆ ಗಂಭೀರ ಗಾಯ !
ಘಟನ ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಜಾಗಗಳ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.