Monday, February 24, 2025

ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ಸಾ*ವು, ಇಬ್ಬರಿಗೆ ಗಂಭೀರ ಗಾಯ

ಮಂಗಳೂರು : ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು. ರಾಯಚೂರು ಮೂಲದ ದೀಪು ಗೌಡ ಎಂಬಾತ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರು ಹೊರವಲಯದ ಕುಳಾಯಿ ಎಂಬಲ್ಲಿ ಅಪಘಾತ ಸಂಭವಿಸಿದ್ದು. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕರಟಗಿಯ ಪ್ರದೀಪ್ ಕೊಲ್ಕಾರ್(35), ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್(37) ಗಂಭೀರವಾಗಿ ಗಾಯಗೊಂಡಿದ್ದರೆ. ಸಿಂಧನೂರಿನ 50 ವರ್ಷದ ದೀಪು ಗೌಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ಪ್ರಿಯಕರನಿಂದ ಗಂಡನ ಕೊಲೆ: ಪ್ಲ್ಯಾನ್​ ಮಾಡಿ ಗಂಡನಿಗೆ ಗುಂಡಿ ತೋಡಿದಳ ಐನಾತಿ ಹೆಂಡತಿ

ಈ ಮೂವರು ಕುಳಾಯಿಯ ಶಂಕರ ಭವನ ಹೋಟೆಲ್​ನಲ್ಲಿ ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66ನ್ನು ದಾಟುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ KA-19-AA-0746 ನಂಬರ್‌ನ ಪಿಕಪ್ ವಾಹನ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ರಸ್ತೆ ದಾಟುತ್ತಿದ್ದ ದೀಪು ಗೌಡ, ಪ್ರದೀಪ್ ಮತ್ತು ನಾಗರಾಜ್ ಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ದೀಪುಗೌಡ ತಲೆ ಮತ್ತು ಹೊಟ್ಟೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿತ್ತು. ಈತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಆದರೆ ಪ್ರದೀಪ್ ಮತ್ತು ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸಂಚಾರಿ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES