ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಸಂಭ್ರಮದ ಬೆನ್ನಲ್ಲೇ ಕುಂಭಮೇಳದ ಐಐಟಿ ಬಾಬಾನ ಭವಿಷ್ಯ ಟ್ರೋಲ್ ಆಗುತ್ತಿದೆ.
ಹೌದು.. ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಕದನ ನಡೆಯುವುದಕ್ಕೆ ಕೆಲವು ದಿನಗಳ ಮುನ್ನ ಐಐಟಿ ಬಾಬಾ ಖಾಸಗಿ ಯುಟ್ಯೂಬ್ ಚಾನೆಲ್ಗೆ ನೀಡಿದ್ದ ಸಂದರ್ಶನದಲ್ಲಿ ಈ ಉಭಯ ತಂಡಗಳ ನಡುವಿನ ಕದನದ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಏನಾಗಿತ್ತು ಅಂದರೆ, ‘ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಲಿದೆ ಎಂದು ಅವರು ಹೇಳಿದ್ದರು. ಇದಲ್ಲದೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಫಲರಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು.
ಇದನ್ನೂ ಓದಿ :ಪೋಕ್ಸೋ ಕೇಸ್ ದಾಖಲಿಸಿದ ಪೊಲೀಸರು ಕಾಮನ್ ಸೆನ್ಸ್ ಉಪಯೋಗಿಸಬೇಕಿತ್ತು: ರಾಮಲಿಂಗ ರೆಡ್ಡಿ
ಆದರೆ ಈ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಪಾಕಿಸ್ತಾನವನ್ನು ಹೊರಗೆ ಕಳುಹಿಸಿದೆ. ಜೊತೆಗೆ ಕಳೆದ ಕೆಲ ಪಂದ್ಯಗಳಿಂದ ಕಳಪೆ ಫಾರ್ಮನಲ್ಲಿದ್ದ ಕಿಂಗ್ ಕೊಹ್ಲಿ ಶತಕ ಬಾರಿಸುವ ಮೂಲಕ ಫಾರ್ಮಗೆ ಮರಳಿದ್ದಾರೆ. ಪಂದ್ಯದ ಹೊರ ಬೀಳುತ್ತಿದ್ದಂತೆ ಐಐಟಿ ಬಾಬಾರನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.